2 Corinthians 12:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೂರನೆಯ ಆಕಾಶಕ್ಕೆ ಒಯ್ಯಲ್ಪಟ್ಟಿದ್ದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆನು. ಇದು ಸಂಭವಿಸಿ ಹದಿನಾಲ್ಕು ವರ್ಷಗಳಾದವು. ಆ ವ್ಯಕ್ತಿಯು ದೇಹಸಹಿತವಾಗಿ ಹೋಗಿದ್ದನೊ ಅಥವಾ ದೇಹರಹಿತನಾಗಿ ಹೋಗಿದ್ದನೊ ನನಗೆ ಗೊತ್ತಿಲ್ಲ. ದೇವರಿಗೆ ಗೊತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು. ಅವನು ಹದಿನಾಲ್ಕು ವರ್ಷಗಳ ಹಿಂದೆ ಮೂರನೆಯ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ, ಅಥವಾ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆನು, ದೇವರೇ ಬಲ್ಲನು.
Kannada BSI Bible 2016
ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.)
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೆಯ ಆಕಾಶದ ಪರಿಯಂತರಕ್ಕೂ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆ, ದೇವರೇ ಬಲ್ಲನು.
Kannada Bible (KNCL) BSI 2016
ಕ್ರೈಸ್ತನಾದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆ. ಅವನು ಹದಿನಾಲ್ಕು ವರ್ಷಗಳಿಗೆ ಹಿಂದೆ ಮಹೋನ್ನತ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ದೇಹಸಹಿತನಾಗಿಯೋ ದೇಹರಹಿತನಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವಿನಲ್ಲಿ ಒಬ್ಬನನ್ನು ನಾನು ಬಲ್ಲೆನು. ಹದಿನಾಲ್ಕು ವರ್ಷಗಳ ಹಿಂದೆ ನಾನು ಮೂರನೆಯ ಸ್ವರ್ಗಕ್ಕೆ ಒಯ್ಯಲಾದೆನು. ನಾನು ದೇಹ ಸಹಿತವಾಗಿ ಹೋದೆನೋ, ದೇಹ ರಹಿತನಾಗಿ ಹೋದೆನೋ ನನಗೆ ಗೊತ್ತಿಲ್ಲ ದೇವರಿಗೇ ಗೊತ್ತು.