2 Corinthians 12:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾರಣವೇನೆಂದರೆ, ನಾನು ಬಂದಾಗ ನನ್ನ ಅಪೇಕ್ಷೆಗೆ ತಕ್ಕಂತೆ ನೀವು ಇರುವುದಿಲ್ಲವೆಂಬ ಭಯ ನನಗಿದೆ. ನಿಮ್ಮ ಸಭೆಯಲ್ಲಿ ವಾದ, ಹೊಟ್ಟೆಕಿಚ್ಚು, ಕೋಪ, ಸ್ವಾರ್ಥಪರವಾದ ಹೋರಾಟ, ಕೆಟ್ಟಮಾತು, ಸುಳ್ಳುಸುದ್ದಿ, ಗರ್ವ ಮತ್ತು ಗಲಿಬಿಲಿ ಇರಬಹುದೆಂಬ ಭಯ ನನಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು.
Kannada BSI Bible 2016
ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ಜಗಳ ಹೊಟ್ಟೆಕಿಚ್ಚು ದ್ವೇಷ ಸ್ವಾರ್ಥಬುದ್ಧಿ ಚಾಡಿಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬರುವದೋ ಏನೋ ನನಗೆ ಸಂಶಯ ಉಂಟು.
Kannada Bible (KNCL) BSI 2016
ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಬಂದಾಗ ಒಂದು ವೇಳೆ ನೀವು ನನ್ನ ಮನಸ್ಸಿನ ತೋರಿಕೆಯ ಪ್ರಕಾರ ಇರುವುದಿಲ್ಲವೋ ಏನೋ? ನಾನು ನಿಮ್ಮ ಇಷ್ಟದ ಪ್ರಕಾರ ತೋರದೆ ಇರಬಹುದು. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ಕೋಪ, ಭೇದಗಳು, ಚಾಡಿ ಹೇಳುವುದು, ಹರಟೆ ಹೊಡೆಯುವುದು, ಉಬ್ಬಿಕೊಳ್ಳುವುದು, ಕಲಹ ಎಬ್ಬಿಸುವುದು, ಇವುಗಳು ಕಾಣಬರುವುದೋ ಎಂಬ ಭಯ ನನಗೆ ಉಂಟು.