2 Corinthians 12:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.
Kannada BSI Bible 2016
ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ತಿರಿಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ನಾಚಿಕೆಗೆ ಗುರಿಮಾಡಾನೆಂತಲೂ, ಪೂರ್ವದಲ್ಲಿ ಬಂಡುತನ ಹಾದರತನ ಪೋಕರಿತನಗಳನ್ನು ನಡಿಸಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯ ಉಂಟು.
Kannada Bible (KNCL) BSI 2016
ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ತಿರುಗಿ ಬಂದಾಗ, ಹಿಂದೆ ನಿಮ್ಮಲ್ಲಿ ಅಶುದ್ಧತ್ವ, ಲೈಂಗಿಕ ಅನೈತಿಕತೆ, ಪೋಕರಿತನ ಮುಂತಾದ ಪಾಪಗಳನ್ನು ಮಾಡಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಬಿಡುವನು ಎಂದು ದುಃಖಪಡಬೇಕಾಗಿರುವುದರಿಂದ ನಾನು ಭಯಪಡುತ್ತೇನೆ.