2 Corinthians 12:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಬಗ್ಗೆ ಹೊಗಳಿಕೊಳ್ಳಬೇಕೆಂದಿದ್ದರೂ ಬುದ್ಧಿಹೀನನಾಗುವುದಿಲ್ಲ, ಏಕೆಂದರೆ ಸತ್ಯವನ್ನೇ ಹೇಳುತ್ತೇನೆ. ಆದರೆ ನನ್ನ ಬಗ್ಗೆ ಹೊಗಳಿಕೊಳ್ಳುವುದಿಲ್ಲ, ಏಕೆಂದರೆ ಜನರು ನನ್ನಲ್ಲಿ ನೋಡುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನ ಬಗ್ಗೆ ಯೋಚಿಸುವುದು ನನಗೆ ಇಷ್ಟವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಗಳಿಕೊಳ್ಳುವುದಕ್ಕೆ ನನಗೆ ಒಂದು ವೇಳೆ ಮನಸ್ಸಿದ್ದರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾನು ಬುದ್ಧಿಹೀನನಾಗುವುದಿಲ್ಲ, ಯಾಕೆಂದರೆ ನಾನು ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ಅಥವಾ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು.
Kannada BSI Bible 2016
ಹೊಗಳಿಕೊಳ್ಳುವದಕ್ಕೆ ನನಗೆ ಮನಸ್ಸಿ ದ್ದರೂ ನಾನು ಬುದ್ದಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದ ಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸದಂತೆ ನಾನು ಮೌನವಾಗಿರುವೆನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಗಳಿಕೊಳ್ಳುವದಕ್ಕೆ ನನಗೆ ಒಂದು ವೇಳೆ ಮನಸ್ಸಿದ್ದರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ಬುದ್ಧಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸಬಾರದು.
Kannada Bible (KNCL) BSI 2016
ಹಾಗೇನಾದರೂ ನಾನು ಹೊಗಳಿಕೊಳ್ಳಲು ಆಶಿಸಿದರೆ ಅದೇನು ಹುಚ್ಚುತನವಲ್ಲ. ಏಕೆಂದರೆ, ನಾನು ನುಡಿಯುತ್ತಿರುವುದು ಸತ್ಯವನ್ನೇ. ಆದರೂ ನಾನು ಹಾಗೆ ಹೊಗಳಿಕೊಳ್ಳುವುದಿಲ್ಲ. ಕಾರಣ, ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ಹೊಗಳಿಕೊಳ್ಳಲು ಬಯಸಿದರೂ ನಾನು ಬುದ್ಧಿಹೀನನಾಗುವುದಿಲ್ಲ. ಏಕೆಂದರೆ, ನಾನು ಸತ್ಯವನ್ನೇ ಹೇಳುತ್ತಿದ್ದೇನೆ. ಆದರೆ ಯಾರೂ ನಾನು ಮಾಡುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನ ಬಗ್ಗೆ ಎಣಿಸಬಾರದು.