2 Corinthians 12:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಈ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.
Kannada BSI Bible 2016
ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.
Kannada Bible (KNCL) BSI 2016
ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಹು ವಿಶೇಷವಾದ ಪ್ರಕಟನೆಗಳ ಬಗ್ಗೆ ನಾನು ಗರ್ವಪಡದಂತೆ, ನನ್ನ ಶರೀರದಲ್ಲಿ ಒಂದು ಮುಳ್ಳನ್ನು ಕೊಡಲಾಗಿತ್ತು. ಅದು ನನ್ನನ್ನು ಕಾಡಿಸಲು ಕಳುಹಿಸಲಾದ ಸೈತಾನನ ದೂತನೇ ಆಗಿತ್ತು.