2 Corinthians 12:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪ್ರಭುವು ನನಗೆ, “ನನ್ನ ಕೃಪೆಯೇ ನಿನಗೆ ಸಾಕು, ನೀನು ಬಲಹೀನನಾಗಿರುವಾಗ ನನ್ನ ಶಕ್ತಿಯು ನಿನ್ನಲ್ಲಿ ಪರಿಪೂರ್ಣವಾಗಿರುತ್ತದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.
Kannada BSI Bible 2016
ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕಾತನು - ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ಬಲವು ಪೂರ್ಣಸಾಧಕವಾಗುತ್ತದೆ ಎಂದು ನನಗೆ ಹೇಳಿದ್ದಾನೆ. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲಸಿಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾವಸ್ಥೆಗಳ ವಿಷಯದಲ್ಲಿಯೇ ಬಹುಸಂತೋಷವಾಗಿ ಹೆಚ್ಚಳಪಡುವೆನು.
Kannada Bible (KNCL) BSI 2016
ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಕರ್ತ ಯೇಸು, “ನನ್ನ ಕೃಪೆಯೇ ನಿನಗೆ ಸಾಕು. ನನ್ನ ಶಕ್ತಿಯು ಬಲಹೀನತೆಯಲ್ಲಿಯೇ ಪರಿಪೂರ್ಣವಾಗುವುದು,” ಎಂದು ನನಗೆ ಹೇಳಿದರು. ಆದ್ದರಿಂದ ಕ್ರಿಸ್ತ ಯೇಸುವಿನ ಶಕ್ತಿಯು ನನ್ನ ಮೇಲೆ ನೆಲೆಯಾಗಿರಬೇಕೆಂದು, ಬಹಳ ಆನಂದದಿಂದ ನನ್ನ ಬಲಹೀನತೆಯಲ್ಲಿಯೇ ಹೆಚ್ಚಳ ಪಡುವೆನು.