2 Corinthians 13:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಮತ್ತೆ ನಿಮ್ಮ ಬಳಿಗೆ ಮೂರನೆ ಸಾರಿ ಬರುತ್ತೇನೆ. ನೆನಪಿಟ್ಟುಕೊಳ್ಳಿರಿ, “ಪ್ರತಿಯೊಂದು ದೂರಿಗೂ ಇಬ್ಬರಾಗಲಿ ಮೂವರಾಗಲಿ ಸಾಕ್ಷಿಗಳಿದ್ದು ತಮಗೆ ಗೊತ್ತಿರುವುದಾಗಿ ಮತ್ತು ಅದು ಸತ್ಯವೆಂದು” ಹೇಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.
Kannada BSI Bible 2016
ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸಂಗತಿ ಸ್ಥಾಪಿತವಾಗಬೇಕು.
Kannada Bible (KNCL) BSI 2016
ನಾನು ನಿಮ್ಮ ಬಳಿಗೆ ಬರುತ್ತಿರುವುದು ಇದು ಮೂರನೆಯ ಬಾರಿ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮ ಬಳಿಗೆ ಬರುವುದು ಇದು ಮೂರನೆಯ ಸಾರಿ. “ಇಬ್ಬರು ಮೂವರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು,” ಎಂದು ಬರೆಯಲಾಗಿದೆ.