2 Corinthians 13:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮ್ಮ ಬಳಿಗೆ ಎರಡನೆ ಸಲ ಬಂದಿದ್ದಾಗ ಪಾಪಕ್ಕೆ ಒಳಗಾಗಿದ್ದವರನ್ನು ಮತ್ತು ಉಳಿದವರೆಲ್ಲರನ್ನು ಎಚ್ಚರಿಸಿದೆನು. ಈಗ ನಾನು ದೂರದಲ್ಲಿದ್ದೇನೆ. ಈ ಪಾಪಕ್ಕೆ ಒಳಗಾಗಿರುವ ಎಲ್ಲರಿಗೂ ನಾನು ಕೊಡುವ ಎಚ್ಚರಿಕೆ ಏನೆಂದರೆ, ನಾನು ನಿಮ್ಮ ಬಳಿಗೆ ಬಂದಾಗ, ನಿಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ.
Kannada BSI Bible 2016
ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ - ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ನಿಮಗೆ ದೂರದಲ್ಲಿದ್ದು ಪೂರ್ವಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ವಿುಕ್ಕಾದವರೆಲ್ಲರಿಗೂ ಹೇಳುತ್ತೇನೆ.
Kannada Bible (KNCL) BSI 2016
ನಾನು ಎರಡನೆಯ ಸಾರಿ ನಿಮ್ಮ ಬಳಿಗೆ ಬಂದಿದ್ದಾಗ, ಪಾಪಮಾಡಿದ್ದವರನ್ನೂ ಇತರರನ್ನೂ ಎಚ್ಚರಿಸಿದ್ದೆನು. ಈಗ ದೂರವಿದ್ದರೂ ಮತ್ತೆ ಎಚ್ಚರಿಸುತ್ತಿದ್ದೇನೆ. ಪುನಃ ನಾನು ಬರುವಾಗ ಅವರಾರನ್ನೂ ಶಿಕ್ಷಿಸದೆ ಬಿಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಎರಡನೆಯ ಸಾರಿ ನಿಮ್ಮ ಬಳಿಗೆ ಬಂದಿದ್ದಾಗ, ಗತಕಾಲದಲ್ಲಿ ಪಾಪ ಮಾಡುತ್ತಿದ್ದವರನ್ನು ಎಚ್ಚರಿಸಿದೆನು. ನಾನು ತಿರುಗಿ ಬಂದರೆ, ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ ದೂರದಲ್ಲಿದ್ದುಕೊಂಡು ಹೇಳುತ್ತಿದ್ದೇನೆ.