2 Corinthians 13:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕ್ರಿಸ್ತನು ನನ್ನ ಮೂಲಕ ಮಾತಾಡುತ್ತಿದ್ದಾನೆ ಎಂಬುದಕ್ಕೆ ನಿಮಗೆ ಸಾಕ್ಷಿಬೇಕು. ನನಗಿರುವ ಸಾಕ್ಷಿ ಏನೆಂದರೆ, ಕ್ರಿಸ್ತನು ನಿಮ್ಮನ್ನು ದಂಡಿಸುವುದರಲ್ಲಿ ಬಲಹೀನನಲ್ಲ. ಕ್ರಿಸ್ತನು ನಿಮ್ಮ ಮಧ್ಯದಲ್ಲಿ ಬಲಿಷ್ಠನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.
Kannada BSI Bible 2016
ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನು ನನ್ನಲ್ಲಿ ಮಾತಾಡುತ್ತಾನೆಂಬದಕ್ಕೆ ನಿಮಗೆ ಬೇಕಾದ ಪ್ರಮಾಣವು ಆಗ ತೋರಿಬರುವದು. ಆತನು ನಿಮ್ಮನ್ನು ಕುರಿತು ನಿರ್ಬಲನಾಗಿರದೆ ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.
Kannada Bible (KNCL) BSI 2016
ಕ್ರಿಸ್ತಯೇಸುವೇ ನನ್ನ ಮುಖಾಂತರ ಮಾತನಾಡುತ್ತಾರೆ ಎಂಬುದಕ್ಕೆ ಆಧಾರ ಬೇಕೆನ್ನುತ್ತೀರಲ್ಲವೇ? ಯೇಸುಕ್ರಿಸ್ತರು ನಿಮ್ಮ ವಿಷಯದಲ್ಲಿ ದುರ್ಬಲರಾಗಿ ವರ್ತಿಸಲಿಲ್ಲ. ಪ್ರಬಲರಾಗಿ ನಿಮ್ಮಲ್ಲಿಯೇ ಇದ್ದಾರೆ ಎಂಬುದೇ ಇದಕ್ಕೆ ಆಧಾರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸು ನನ್ನ ಮೂಲಕ ಮಾತನಾಡುತ್ತಾನೆಂಬುದಕ್ಕೆ ನಿಮಗೆ ಬೇಕಾದ ನಿದರ್ಶನವು ಆಗ ತೋರಿಬರುವುದು. ಬಲಹೀನನಾಗಿ ಕ್ರಿಸ್ತನು ನಿಮ್ಮೊಂದಿಗೆ ವ್ಯವಹರಿಸದೆ, ನಿಮ್ಮ ನಡುವೆ ಶಕ್ತನಾಗಿದ್ದಾನೆ.