2 Corinthians 13:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕ್ರಿಸ್ತನು ಶಿಲುಬೆಯ ಮೇಲೆ ಕೊಲ್ಲಲ್ಪಟ್ಟಾಗ ಬಲಹೀನನಾಗಿದ್ದನು ಎಂಬುದೇನೊ ನಿಜ. ಆದರೆ ಈಗ ಆತನು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾನೆ. ಅಲ್ಲದೆ ನಾವು ಕ್ರಿಸ್ತನಲ್ಲಿ ಬಲಹೀನರೆಂಬುದೂ ನಿಜ. ಆದರೆ ನಾವು ನಿಮಗೋಸ್ಕರವಾಗಿ ಕ್ರಿಸ್ತನಲ್ಲಿ ದೇವರ ಶಕ್ತಿಯಿಂದ ಜೀವಿಸುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ.
Kannada BSI Bible 2016
ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಬಲಹೀನಾವಸ್ಥೆಯಲ್ಲಿದ್ದದರಿಂದ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಬದುಕುತ್ತಾನೆ. ನಾವು ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ; ಆದರೂ ಆತನೊಂದಿಗೆ ದೇವರ ಬಲದಿಂದ ಬದುಕುವವರಾಗಿದ್ದೇವೆ; ಇದು ನಿಮಗೆ ತೋರಿಬರುವದು.
Kannada Bible (KNCL) BSI 2016
ಬಲಹೀನಾವಸ್ಥೆಯಲ್ಲಿ ಅವರನ್ನು ಶಿಲುಬೆಗೇರಿಸಲಾಯಿತು ಎಂಬುದೇನೋ ನಿಜ. ಆದರೆ, ದೇವರ ಶಕ್ತಿಯಿಂದ ಅವರು ಜೀವಂತರಾಗಿದ್ದಾರೆ. ಕ್ರಿಸ್ತಯೇಸುವಿನಲ್ಲಿ ನಾವೂ ಬಲಹೀನರೇ. ಆದರೆ ನಿಮ್ಮ ವಿಷಯದಲ್ಲಿ ವರ್ತಿಸುವಾಗ ದೇವರ ಶಕ್ತಿಯಿಂದ ಯೇಸುಸ್ವಾಮಿಯೊಂದಿಗೆ ಜೀವಂತರಾಗಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸು ಬಲಹೀನತೆಯಲ್ಲಿ ಶಿಲುಬೆಗೆ ಹಾಕಲಾದರು ನಿಜ. ಆದರೆ ಅವರು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾರೆ. ನಾವು ಸಹ ಬಲಹೀನತೆಯುಳ್ಳವರಾಗಿದ್ದೇವೆ. ಆದರೆ ನಾವು ನಿಮ್ಮ ಸೇವೆ ಮಾಡುವಂತೆ, ನಾವು ಕ್ರಿಸ್ತ ಯೇಸುವಿನೊಂದಿಗೆ ದೇವರ ಶಕ್ತಿಯಿಂದ ಬದುಕುತ್ತಿದ್ದೇವೆ.