2 Corinthians 13:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ನಂಬಿಕೆಯಲ್ಲಿ ಜೀವಿಸುತ್ತಿದ್ದೀರೋ ಎಂಬುದನ್ನು ತಿಳಿದುಕೊಳ್ಳಲು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ಕ್ರಿಸ್ತಯೇಸುವು ನಿಮ್ಮೊಳಗೆ ಇದ್ದಾನೆಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರಾಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.
Kannada BSI Bible 2016
ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬದು ನಿಮ್ಮನ್ನು ಕುರಿತು ನಿಮಗೆ ಚೆನ್ನಾಗಿ ತಿಳಿಯುವದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರೇ.
Kannada Bible (KNCL) BSI 2016
ನಿಮ್ಮ ಜೀವನ ವಿಶ್ವಾಸದಲ್ಲಿ ಬೇರೂರಿದೆಯೇ ಎಂಬುದನ್ನು ನೀವೇ ಪರೀಕ್ಷಿಸಿನೋಡಿ. ನಿಮ್ಮ ಅಂತರಂಗವನ್ನು ಪರಿಶೋಧಿಸಿ ನೋಡಿ. ಕ್ರಿಸ್ತಯೇಸು ನಿಮ್ಮಲ್ಲಿ ಇದ್ದಾರೆ ಎಂಬುದನ್ನು ಅರಿತಿದ್ದೀರಿ ಅಲ್ಲವೇ? ಅವರು ನಿಮ್ಮಲ್ಲಿ ಇಲ್ಲವಾದರೆ ನೀವು ಅಯೋಗ್ಯರೇ ಸರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂಬಿಕೆಯಲ್ಲಿ ಇದ್ದೀರೋ, ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಕ್ರಿಸ್ತ ಯೇಸು ನಿಮ್ಮಲ್ಲಿದ್ದಾರೆಂಬುದರ ಬಗ್ಗೆ ನಿಮಗೆ ನಂಬಿಕೆಯಿಲ್ಲವೋ? ಅವರು ನಿಮ್ಮಲ್ಲಿಲ್ಲದಿದ್ದರೆ, ನೀವು ಪರೀಕ್ಷೆಯಲ್ಲಿ ಉತ್ತೀರ್ಣರಾದವರಲ್ಲ.