2 Corinthians 13:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಯಾವ ತಪ್ಪನ್ನೂ ಮಾಡದಿರಲಿ ಎಂಬುದಾಗಿ ನಾವು ದೇವರಲ್ಲಿ ಪ್ರಾರ್ಥಿಸುತ್ತೇವೆ. ನಮ್ಮನ್ನು ಅಯೋಗ್ಯರೆಂದು ಜನರು ಭಾವಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವುದೇ ಮುಖ್ಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ.
Kannada BSI Bible 2016
ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂದಲ್ಲ, ನಾವು ಭ್ರಷ್ಠರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವ ರಾಗ ಬೇಕೆಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂಬದು ನಮ್ಮ ಉದ್ದೇಶವಲ್ಲ; ನಾವು ಅಯೋಗ್ಯರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವರಾಗಬೇಕೆಂಬದೇ ನಮ್ಮ ಉದ್ದೇಶ.
Kannada Bible (KNCL) BSI 2016
ನೀವು ಯಾವ ಕೇಡನ್ನೂ ಮಾಡಬಾರದೆಂದು ದೇವರಲ್ಲಿ ನಾವು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವು ಮಾತ್ರ ಯೋಗ್ಯರೆಂದು ತೋರಿಸಿಕೊಳ್ಳುವ ಉದ್ದೇಶ ನಮಗಿಲ್ಲ. ನಾವು ಅಯೋಗ್ಯರೆನಿಸಿಕೊಂಡಿದ್ದರೂ ನೀವು ಒಳಿತನ್ನೇ ಮಾಡಬೇಕೆಂಬುದು ನಮ್ಮ ಉದ್ದೇಶ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಉತ್ತೀರ್ಣರಾದವರು ಎಂದು ಕಂಡುಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಸೋತವರಾಗಿ ಕಂಡುಬಂದರೂ ನೀವು ಒಳ್ಳೆಯದನ್ನೇ ಮಾಡಬೇಕೆಂಬುದು ನಮ್ಮ ಪ್ರಾರ್ಥನೆಯಾಗಿದೆ.