2 Corinthians 2:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೈತಾನನು ನಮ್ಮಿಂದ ಯಾವುದನ್ನೂ ಕಸಿದುಕೊಳ್ಳಬಾರದೆಂದು ನಾನು ಹೀಗೆ ಮಾಡಿದೆನು. ಸೈತಾನನ ಯೋಜನೆಗಳು ಯಾವುವೆಂದು ನಮಗೆ ಚೆನ್ನಾಗಿ ತಿಳಿದಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದೆನು. ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲಾ.
Kannada BSI Bible 2016
ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೈತಾನನು ನಮ್ಮನ್ನು ವಂಚಿಸಿ ನಷ್ಟಪಡಿಸಬಾರದು; ಅವನ ಯೋಚನೆಗಳನ್ನು ನಾವು ಅರಿಯದವರಲ್ಲವಲ್ಲಾ.
Kannada Bible (KNCL) BSI 2016
ಸೈತಾನನ ಕುತಂತ್ರಗಳನ್ನು ನಾವು ಅರಿಯದವರಲ್ಲ; ಅವನ ಕೈ ಮೇಲಾಗದಂತೆ ನಾವು ನೋಡಿಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೈತಾನನು ನಮ್ಮನ್ನು ವಂಚಿಸಲು ಅವಕಾಶ ಕೊಡಬಾರದು. ಅವನ ಕುತಂತ್ರಗಳನ್ನು ನಾವು ಅರಿತವರಲ್ಲವೇ?