2 Corinthians 2:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನನ್ನ ಸಹೋದರನಾದ ತೀತನನ್ನು ನಾನು ಅಲ್ಲಿ ಕಾಣಲಿಲ್ಲವಾದ್ದರಿಂದ ನನಗೆ ಸಮಾಧಾನವಿರಲಿಲ್ಲ. ಆದ್ದರಿಂದ ನಾನು ಅವರನ್ನು ವಂದಿಸಿ ಮಕೆದೋನಿಯಕ್ಕೆ ಹೊರಟೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.
Kannada BSI Bible 2016
ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.
Kannada Bible (KNCL) BSI 2016
ಆದರೆ ನನ್ನ ಸಹೋದರ ತೀತನನ್ನು ಅಲ್ಲಿ ಕಾಣದೆಹೋದುದರಿಂದ ನನ್ನ ಮನಸ್ಸಿಗೆ ನೆಮ್ಮದಿ ಇಲ್ಲವಾಯಿತು. ಕೂಡಲೇ ಅಲ್ಲಿಯ ಜನರಿಂದ ಬೀಳ್ಕೊಂಡು ಮಕೆದೋನಿಯಕ್ಕೆ ಹೊರಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಸಹೋದರನಾದ ತೀತನು ನನಗೆ ಅಲ್ಲಿ ಸಿಗದಿದ್ದ ಕಾರಣ, ನನ್ನ ಆತ್ಮಕ್ಕೆ ಇನ್ನೂ ವಿಶ್ರಾಂತಿಯಿರಲಿಲ್ಲ. ಆದ್ದರಿಂದ ತ್ರೋವದವರಿಗೆ ನಾನು ನನ್ನ ವಂದನೆಗಳನ್ನರ್ಪಿಸಿ ಮಕೆದೋನ್ಯ ಪ್ರಾಂತಕ್ಕೆ ಹೋದೆನು.