2 Corinthians 2:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರಿಗೆ ಸ್ತೋತ್ರವಾಗಲಿ. ದೇವರು ನಮ್ಮನ್ನು ಕ್ರಿಸ್ತನ ಮೂಲಕ ಯಾವಾಗಲೂ ವಿಜಯೋತ್ಸವದತ್ತ ನಡೆಸುತ್ತಿದ್ದಾನೆ. ದೇವರು ತನ್ನ ಜ್ಞಾನವೆಂಬ ಪರಿಮಳವನ್ನು ಎಲ್ಲಾ ಕಡೆಗಳಲ್ಲಿಯೂ ಹರಡಲು ನಮ್ಮನ್ನು ಉಪಯೋಗಿಸುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.
Kannada BSI Bible 2016
ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು.
Kannada Bible (KNCL) BSI 2016
ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವಿನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರೆಸುತ್ತಾ, ಅವರ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ಪ್ರಸಾರಗೊಳಿಸುವ ದೇವರಿಗೆ ಕೃತಜ್ಞತೆಗಳು.