2 Corinthians 2:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾಶನಮಾರ್ಗದಲ್ಲಿರುವ ಜನರಿಗೆ ಮರಣವನ್ನು ಉಂಟುಮಾಡುವ ಮರಣದ ವಾಸನೆಯಾಗಿದ್ದೇವೆ. ಆದರೆ ರಕ್ಷಣಾಮಾರ್ಗದಲ್ಲಿರುವ ಜನರಿಗೆ ಜೀವವನ್ನು ಉಂಟುಮಾಡುವ ಜೀವದ ವಾಸನೆಯಾಗಿದ್ದೇವೆ. ಹೀಗಿರಲಾಗಿ, ಈ ಕಾರ್ಯವನ್ನು ಮಾಡಲು ಯಾರು ಯೋಗ್ಯರಾಗಿದ್ದಾರೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ವಿನಾಶಮಾರ್ಗದಲ್ಲಿರುವವರಿಗೆ ಮೃತ್ಯುಕಾರಕ ಗಂಧ; ರಕ್ಷಣಾಮಾರ್ಗದಲ್ಲಿರುವವರಿಗೆ ಸಜೀವದಾಯಕ ಸುಗಂಧ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?
Kannada BSI Bible 2016
ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ನಾಶನಮಾರ್ಗದಲ್ಲಿರುವವರಿಗೆ ಮರಣದಿಂದ ಹುಟ್ಟಿ ಮರಣವನ್ನು ಹುಟ್ಟಿಸುವ ವಾಸನೆಯಾಗಿಯೂ ರಕ್ಷಣಾಮಾರ್ಗದಲ್ಲಿರುವವರಿಗೆ ಜೀವದಿಂದ ಹುಟ್ಟಿ ಜೀವವನ್ನು ಹುಟ್ಟಿಸುವ ವಾಸನೆಯಾಗಿಯೂ ಇದ್ದೇವೆ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?
Kannada Bible (KNCL) BSI 2016
ವಿನಾಶ ಮಾರ್ಗದಲ್ಲಿರುವವರಿಗೆ ಇದು ಮೃತ್ಯುಕಾರಕ ಗಂಧ; ಉದ್ಧಾರ ಮಾರ್ಗದಲ್ಲಿರುವವರಿಗೆ ಇದು ಸಜ್ಜೀವದಾಯಕ ಸುಗಂಧ. ಇಂಥ ಕಾರ್ಯಕ್ಕೆ ಸಮರ್ಥರು ಯಾರು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವರಿಗೆ ನಾವು ಮರಣದ ವಾಸನೆಯಾಗಿದ್ದೇವೆ. ಇತರರಿಗೆ ಜೀವವನ್ನು ಹುಟ್ಟಿಸುವ ವಾಸನೆಯಾಗಿರುತ್ತೇವೆ. ಇಂಥ ಸೇವೆಗೆ ಸಮರ್ಥರು ಯಾರು?