2 Corinthians 2:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.
Kannada BSI Bible 2016
ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಾವು ದೇವರ ವಾಕ್ಯವನ್ನು ಕಲಬೆರಿಕೆಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಉಪದೇಶ ಹೊಂದಿದವರಿಗೆ ತಕ್ಕ ಹಾಗೆ ಕ್ರಿಸ್ತನ ಅನ್ಯೋನ್ಯತೆಯಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತಾಡುತ್ತೇವೆ.
Kannada Bible (KNCL) BSI 2016
ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ, ಅದರಿಂದ ಹಣಗಳಿಸುತ್ತಾರೆ. ನಾವಾದರೋ ಹಾಗೆ ಮಾಡುವವರಲ್ಲ. ನಾವು ದೇವರಿಂದ ಕಳುಹಿಸಲಾದವರಾಗಿ ಕ್ರಿಸ್ತ ಯೇಸುವಿನಲ್ಲಿದ್ದುಕೊಂಡು ದೇವರ ಮುಂದೆ ಯಥಾರ್ಥವಾಗಿ ಮಾತನಾಡುತ್ತೇವೆ.