2 Corinthians 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮ್ಮ ಬಳಿಗೆ ಬಂದಾಗ, ನನ್ನನ್ನು ಸಂತೋಷಗೊಳಿಸಬೇಕಾದ ಜನರಿಂದಲೇ ನನಗೆ ದುಃಖವಾಗಬಾರದೆಂಬ ಉದ್ದೇಶದಿಂದ ನಾನು ನಿಮಗೆ ಈ ಪತ್ರವನ್ನು ಬರೆದೆನು. ನೀವೆಲ್ಲರೂ ನನ್ನ ಆನಂದದಲ್ಲಿ ಪಾಲುಗಾರರಾಗುತ್ತೀರಿ ಎಂಬ ಭರವಸೆ ನನಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನಾನು ಆ ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು ನಂಬಿದ್ದೇನೆ.
Kannada BSI Bible 2016
ನಾನು ಬಂದಾಗ ನನ್ನನು ಸಂತೋಷಪಡಿಸತಕ್ಕವರಿಂದ ದುಃಖ ಹೊಂದಬಾರ ದೆಂದೂ ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದೂ ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸ ವಿರುವದರಿಂದ ನಾನು ನಿಮಗೆ ಇದನ್ನು ಬರೆದಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನಾನು ಬಂದಾಗ ನನ್ನನ್ನು ಸಂತೋಷಪಡಿಸತಕ್ಕವರಿಂದ ದುಃಖಹೊಂದಬಾರದೆಂದು ಯೋಚಿಸಿ ಆ ಸಂಗತಿಯನ್ನು ಪತ್ರಿಕೆಯ ಮೂಲಕವೇ ತಿಳಿಸಿದೆನು. ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದು ತಿಳಿದು ನಿಮ್ಮೆಲ್ಲರ ವಿಷಯದಲ್ಲೂ ನನಗೆ ಭರವಸವಿತ್ತು.
Kannada Bible (KNCL) BSI 2016
ಇದಕ್ಕಾಗಿಯೇ ನಾನು ಆ ಪತ್ರವನ್ನು ಬರೆದದ್ದು; ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮ ಸಂತೋಷವೆಂದು ನೀವು ಭಾವಿಸುತ್ತೀರೆಂದು ಬಲ್ಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಬಂದಾಗ ನನ್ನನ್ನು ಆನಂದಪಡಿಸತಕ್ಕವರಿಂದಲೇ ದುಃಖ ಹೊಂದಬಾರದೆಂದು ನಾನು ಹಿಂದಿನ ಪತ್ರವನ್ನು ನಿಮಗೆ ಬರೆದಿದ್ದೇನೆ. ನನ್ನ ಆನಂದದಲ್ಲಿ ನೀವೆಲ್ಲರೂ ಪಾಲಾಗುವಿರಿ ಎಂದು ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸೆ ಇದೆ.