2 Corinthians 2:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಮೊದಲೊಮ್ಮೆ ನಿಮಗೆ ಬರೆದಾಗ, ನನ್ನ ಹೃದಯವು ಬಹಳ ಗಲಿಬಿಲಿಗೊಂಡಿತ್ತು ಮತ್ತು ದುಃಖಗೊಂಡಿತ್ತು. ನಾನು ಕಣ್ಣೀರಿಡುತ್ತಾ ನಿಮಗೆ ಬರೆದದ್ದು ನಿಮ್ಮನ್ನು ದುಃಖಗೊಳಿಸುವುದಕ್ಕಲ್ಲ, ನಿಮ್ಮನ್ನು ಎಷ್ಟು ಪ್ರೀತಿಸುತ್ತೇನೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದಷ್ಟೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಬಹಳವಾಗಿ ಕಣ್ಣೀರಿಡುತ್ತಾ ಹೃದಯದ ಬಹು ಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನೇ ಹೊರತು ನಿಮ್ಮನ್ನು ನೋಯಿಸುವುದಕ್ಕಾಗಿಯಲ್ಲ.
Kannada BSI Bible 2016
ನಿಮಗೆ ದುಃಖವಾಗಬೇಕಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದು ಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರಿನಿಂದಲೂ ಹೃದಯದ ಬಹುಸಂಕಟದಿಂದಲೂ ವ್ಯಾಕುಲ ದಿಂದಲೂ ನಿಮಗೆ ಬರೆದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ದುಃಖವಾಗಬೇಕೆಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳುಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರು ಬಿಡುತ್ತಾ ಹೃದಯದ ಬಹುಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನು.
Kannada Bible (KNCL) BSI 2016
ಮನೋವ್ಯಥೆಯಿಂದಲೂ ಹೃದಯವೇದನೆಯಿಂದಲೂ ಕಣ್ಣೀರಿಡುತ್ತಾ ನಾನು ನಿಮಗೆ ಪತ್ರ ಬರೆದೆ. ನಿಮ್ಮನ್ನು ದುಃಖಕ್ಕೀಡುಮಾಡಬೇಕೆಂದಲ್ಲ, ನಿಮ್ಮನ್ನು ಎಷ್ಟರಮಟ್ಟಿಗೆ ಪ್ರೀತಿಸುತ್ತಿರುವೆನೆಂದು ನೀವು ತಿಳಿದುಕೊಳ್ಳಬೇಕೆಂದು ಬರೆದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ನಿಮಗೆ ದುಃಖವಾಗಬೇಕೆಂದಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಮಹಾ ದುಃಖದಿಂದಲೂ ಬಹಳ ಕಣ್ಣೀರಿನಿಂದಲೂ ಹೃದಯದ ವೇದನೆಯಿಂದಲೂ ನಿಮಗೆ ಬರೆದೆನು.