2 Corinthians 3:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ನಮ್ಮ ವಿಷಯವಾಗಿ ಮತ್ತೆ ಹೊಗಳಿಕೊಳ್ಳಲು ಆರಂಭಿಸಿದ್ದೇವೆಯೇ? ಇತರ ಕೆಲವು ಜನರಿಗೆ ಬೇಕಾಗುವಂತೆ ನಿಮ್ಮ ಬಳಿಗೆ ಬರಲು ನನಗೆ ಯೋಗ್ಯತಾಪತ್ರಗಳನ್ನು ತೆಗೆದು ಕೊಳ್ಳಬೇಕಾಗಿದೆಯೋ? ಅಥವಾ ಬೇರೆಡೆಗೆ ಹೋಗುವಾಗ ನಿಮ್ಮಿಂದ ಯೋಗ್ಯತಾ ಪತ್ರಗಳನ್ನು ತೆಗೆದುಕೊಳ್ಳಬೇಕಾಗಿದೆಯೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮನ್ನು ನಾವೇ ಮತ್ತೆ ಹೊಗಳಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡೆದುಕೊಳ್ಳಬೇಕೋ?
Kannada BSI Bible 2016
ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವೇ ನಮ್ಮನ್ನು ತಿರಿಗಿ ಹೊಗಳಿಕೊಳ್ಳುವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿವ್ಮಿುಂದ ಪಡಕೊಳ್ಳಬೇಕೋ?
Kannada Bible (KNCL) BSI 2016
ನಾವೀಗ ಆತ್ಮಸ್ತುತಿಯನ್ನು ಮಾಡಲು ಆರಂಭಿಸಿದಂತೆ ತೋರುತ್ತದೆಯೇ? ಅಥವಾ ನಿಮಗೆ ತೋರಿಸಲು ಯೋಗ್ಯತಾಪತ್ರ ಇತರರಿಗೆ ಬೇಕಾಗಿರುವಂತೆ ನಮಗೂ ಬೇಕಾಗಿದೆಯೇ? ಇಲ್ಲವೆ, ಯೋಗ್ಯತಾಪತ್ರವನ್ನು ನಿಮ್ಮಿಂದ ಪಡೆಯುವ ಅವಶ್ಯಕತೆ ನಮಗೂ ಇದೆಯೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮನ್ನು ನಾವೇ ತಿರುಗಿ ಶಿಫಾರಸ್ಸು ಮಾಡಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಬೇರೆಯವರಂತೆ ನಿಮಗೆ ತೋರಿಸುವುದಕ್ಕೆ ಯೋಗ್ಯತಾಪತ್ರವು ಬೇಕೋ ಅಥವಾ ನಿಮ್ಮಿಂದ ನಮಗೆ ಯೋಗ್ಯತಾಪತ್ರವು ಬೇಕಾಗಿದೆಯೋ?