2 Corinthians 3:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಮೋಶೆಯಂತಿಲ್ಲ. ಕುಂದಿ ಹೋಗುವ ಮಹಿಮೆಯು ಅಂತ್ಯಗೊಳ್ಳುವುದನ್ನು ಇಸ್ರೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕುಂದಿಹೋಗುವಂಥ ಮಹಿಮೆಯು ಕುಂದಿಹೋಗುವುದನ್ನು ಇಸ್ರಾಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಳ್ಳುತ್ತಿದ್ದನು. ನಾವು ಮೋಶೆಯಂತೆ ಮಾಡುವುದಿಲ್ಲ.
Kannada BSI Bible 2016
ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಮೋಶೆಯಂತೆ ಮಾಡುವದಿಲ್ಲ, ಗತಿಸಿಹೋಗುವಂಥದರ ಅಂತ್ಯವನ್ನು ಇಸ್ರಾಯೇಲ್ಯರು ಕಣ್ಣಿಟ್ಟು ನೋಡಬಾರದೆಂದು ಅವನು ತನ್ನ ಮುಖದ ಮೇಲೆ ಮುಸುಕುಹಾಕಿಕೊಳ್ಳುತ್ತಿದ್ದನು.
Kannada Bible (KNCL) BSI 2016
ಕುಂದಿಹೋಗುವಂಥ ಮಹಿಮೆಯು ನಂದಿಹೋಗುವುದನ್ನು ಇಸ್ರಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕುಹಾಕಿಕೊಳ್ಳುತ್ತಿದ್ದನು. ನಾವು ಆತನಂತೆ ಅಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಮುಖದಲ್ಲಿರುವ ಮಹಿಮೆಯು ಕುಂದಿ ಹೋಗುತ್ತಿರುವುದನ್ನು ಇಸ್ರಾಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಂಡನು. ನಾವು ಮೋಶೆಯಂತೆ ಮಾಡುವವರಲ್ಲ.