2 Corinthians 3:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವರ ಬುದ್ಧಿಗೆ ಮಂಕು ಕವಿದಿದ್ದರಿಂದ ಅವರು ಅರ್ಥಮಾಡಿಕೊಳ್ಳಲಾಗಲಿಲ್ಲ. ಅವರು ಹಳೆ ಒಡಂಬಡಿಕೆಯನ್ನು ಓದುವಾಗ ಇಂದಿಗೂ ಅದೇ ಮುಸುಕು ಅರ್ಥವನ್ನು ಮರೆಮಾಡುತ್ತದೆ. ಆ ಮುಸುಕನ್ನು ತೆಗೆದು ಹಾಕಲಿಲ್ಲ. ಏಕೆಂದರೆ ಕ್ರಿಸ್ತನ ಮೂಲಕವಾಗಿ ಮಾತ್ರ ಅದು ತೆಗೆದುಹಾಕಲ್ಪಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.
Kannada BSI Bible 2016
ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವರ ಬುದ್ಧಿ ಮಂದವಾಯಿತು; ಈ ದಿನದವರೆಗೂ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗ ಅದು ಕ್ರಿಸ್ತನಲ್ಲಿ ಗತಿಸಿಹೋಗುತ್ತದೆಂಬದು ಅವರಿಗೆ ಪ್ರಕಟವಾಗದೆ ಇರುವದರಿಂದ ಅದೇ ಮುಸುಕು ಎತ್ತಲ್ಪಡದೆ ಇರುತ್ತದೆ.
Kannada Bible (KNCL) BSI 2016
ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಇಂದಿನವರೆಗೂ ಹಳೆಯ ಒಡಂಬಡಿಕೆಯನ್ನು ಓದುವಾಗಲೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತಯೇಸುವಿನ ಮುಖಾಂತರವೇ ತೆಗೆಯಲು ಸಾಧ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಇಸ್ರಾಯೇಲರ ಬುದ್ಧಿ ಮಂದವಾಯಿತು. ಈ ದಿನದವರೆಗೂ ಹಳೆಯ ಒಡಂಬಡಿಕೆಯು ಓದುವಾಗಲೆಲ್ಲಾ, ಅದೇ ಮುಸುಕು ಅವರಲ್ಲಿ ಇರುತ್ತದೆ. ಅದು ಕ್ರಿಸ್ತ ಯೇಸುವಿನಲ್ಲಿ ಮಾತ್ರವೇ ತೆಗೆಯಲು ಸಾಧ್ಯ. ಆದ್ದರಿಂದ ಅದು ಈಗಲೂ ತೆಗೆದುಹಾಕಲಾಗಿಲ್ಲ.