2 Corinthians 3:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.
Kannada BSI Bible 2016
ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.
Kannada Bible (KNCL) BSI 2016
ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.