2 Corinthians 3:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಸ್ವಂತ ಶಕ್ತಿಯಿಂದಲೇ ನಾವು ಯಾವ ಒಳ್ಳೆಯದನ್ನಾದರೂ ಮಾಡಬಲ್ಲೆವೆಂದು ನಾನು ಹೇಳುತ್ತಿಲ್ಲ. ನಾವು ಮಾಡುವ ಕಾರ್ಯಗಳನ್ನು ದೇವರು ಒದಗಿಸಿದ ಸಾಮರ್ಥ್ಯದಿಂದಲೇ ಮಾಡುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು.
Kannada BSI Bible 2016
ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
Kannada Bible (KNCL) BSI 2016
ನಮ್ಮ ಸ್ವಂತ ಶಕ್ತಿಯಿಂದಲೇ ಏನನ್ನೋ ಸಾಧಿಸಿಬಿಟ್ಟಿದ್ದೇವೆ ಎಂದು ಹೇಳಿಕೊಳ್ಳುವ ಸಾಮರ್ಥ್ಯ ನಮಗಿಲ್ಲ. ನಮ್ಮ ಸಾಮರ್ಥ್ಯವೆಲ್ಲ ದೇವರಿಂದಲೇ ಬಂದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮಿಂದಲೇ ಉಂಟಾಯಿತು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಯಾವ ಸಾಮರ್ಥ್ಯವೂ ಇಲ್ಲ. ನಮ್ಮ ಸಾಮರ್ಥ್ಯವು ದೇವರಿಂದಲೇ ಬರುತ್ತದೆ.