2 Corinthians 3:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ದೇವರೇ ನಮಗೆ ಕೊಟ್ಟನು. ಈ ಹೊಸ ಒಡಂಬಡಿಕೆಯು ಲಿಖಿತ ರೂಪವಾದ ಧರ್ಮಶಾಸ್ತ್ರವಲ್ಲ. ಇದು ಪವಿತ್ರಾತ್ಮನದು. ಲಿಖಿತ ರೂಪವಾದ ಧರ್ಮಶಾಸ್ತ್ರವು ಮರಣವನ್ನು ತರುತ್ತದೆ, ಆದರೆ ಪವಿತ್ರಾತ್ಮನು ಜೀವವನ್ನು ಕೊಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.
Kannada BSI Bible 2016
ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತ ರೂಪವಾದದ್ದಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತರೂಪವಾದ ಒಡಂಬಡಿಕೆಯು ಮರಣವನ್ನುಂಟುಮಾಡುತ್ತದೆ; ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.
Kannada Bible (KNCL) BSI 2016
ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ, ಪವಿತ್ರಾತ್ಮರಿಗೆ ಸಂಬಂಧಿಸಿದ್ದು. ಲಿಖಿತವಾದುದು ಮೃತ್ಯುಕಾರಕವಾದುದು; ಪವಿತ್ರಾತ್ಮ ಸಂಬಂಧವಾದುದು ಸಜ್ಜೀವದಾಯಕವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.
Recommended Reading