2 Corinthians 3:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದರರ್ಥವೇನೆಂದರೆ: ಆ ಸೇವೆಯು (ಧರ್ಮಶಾಸ್ತ್ರ) ಜನರನ್ನು ಅಪರಾಧಿಗಳೆಂದು ತೀರ್ಪು ನೀಡಿತು, ಆದರೆ ಅದು ಮಹಿಮೆಯನ್ನು ಹೊಂದಿತ್ತು. ಹೀಗಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೂ ಹೆಚ್ಚಿನ ಮಹಿಮೆಯನ್ನು ಉಂಟುಮಾಡುವುದು ಎಷ್ಟೋ ನಿಶ್ಚಯವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಪರಾಧ ನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಮಹಿಮೆಹೊಂದಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೆಷ್ಟೋ ಅಧಿಕ ಮಹಿಮೆಯುಳ್ಳದ್ದಾಗಿ ಇರತ್ತದಲ್ಲವೋ?
Kannada BSI Bible 2016
ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಪರಾಧನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಪ್ರಭಾವದಿಂದಿರಲಾಗಿ ನೀತಿಗೆ ಸಾಧನವಾಗಿರುವ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.
Kannada Bible (KNCL) BSI 2016
ದಂಡನೆಗೆ ಗುರಿಮಾಡುವ ಈ ಶಾಸನ ಸೇವೆ ಇಷ್ಟು ಮಹಿಮೆಯಿಂದ ಕೂಡಿದ್ದಾದರೆ, ಸದ್ಧರ್ಮಿಗಳೆಂದು ನಿರ್ಣಯಿಸುವ ಸೇವೆ ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯರನ್ನು ದಂಡನಾ ತೀರ್ಪಿಗೆ ಒಳಪಡಿಸುವಂಥ ಸೇವೆಯೇ ಮಹಿಮೆಯುಳ್ಳದ್ದಾಗಿದ್ದರೆ, ನೀತಿವಂತರೆಂದು ನಿರ್ಣಯಿಸುವ ಸೇವೆಯು ಇನ್ನೆಷ್ಟು ಮಹಿಮೆಯುಳ್ಳದ್ದಾಗಿರಬೇಕು!