2 Corinthians 4:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಜೀವಂತವಾಗಿದ್ದರೂ ಯೇಸುವಿಗೋಸ್ಕರ ಯಾವಾಗಲೂ ಮರಣದ ಅಪಾಯದಲ್ಲಿದ್ದೇವೆ. ಸತ್ತುಹೋಗುವ ನಮ್ಮ ದೇಹಗಳಲ್ಲಿ ಆತನ ಜೀವವು ಕಾಣಬರಲೆಂದು ಇದು ನಮಗೆ ಸಂಭವಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
Kannada BSI Bible 2016
ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸುವಿನ ಜೀವವು ನಮ್ಮ ಮರ್ತ್ಯಶರೀರದಲ್ಲಿ ಉಂಟೆಂದು ತೋರಿಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿವಿುತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
Kannada Bible (KNCL) BSI 2016
ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಜೀವಂತವಾಗಿರುವ ನಾವು ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಪ್ರಕಟಿಸುವಂತೆ, ನಮ್ಮನ್ನು ಯಾವಾಗಲೂ ಯೇಸುವಿಗಾಗಿ ಮರಣಕ್ಕೆ ಒಪ್ಪಿಸಿಕೊಟ್ಟವರಾಗಿದ್ದೇವೆ.