2 Corinthians 4:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ನಂಬಿದ್ದರಿಂದಲೇ ಮಾತಾಡಿದೆನು.” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನಮ್ಮ ನಂಬಿಕೆಯು ಸಹ ಅದೇ ರೀತಿಯಲ್ಲಿದೆ. ನಾವು ನಂಬುವುದರಿಂದಲೇ ಮಾತಾಡುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ.
Kannada BSI Bible 2016
ಹೀಗಿದ್ದರೂ--ನಾನು ನಂಬಿದೆನು, ಆದದರಿಂದ ಮಾತನಾಡಿದೆನು ಎಂದು ಬರೆಯಲ್ಪಟ್ಟಿರುವ ಪ್ರಕಾರ ನಂಬಿಕೆಯ ಆತ್ಮವನ್ನೇ ಹೊಂದಿ ನಾವು ಸಹ ನಂಬುತ್ತೇವೆ; ಆದದರಿಂದ ಮಾತನಾಡುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿದ್ದರೂ - ನಂಬಿದೆನು, ಆದದರಿಂದ ಮಾತಾಡಿದೆನು ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವ ನಂಬಿಕೆಯ ಭಾವವನ್ನೇ ಹೊಂದಿ ನಾವೂ ನಂಬಿದವರು, ಆದದರಿಂದ ಮಾತಾಡುತ್ತೇವೆ.
Kannada Bible (KNCL) BSI 2016
“ನಾನು ವಿಶ್ವಾಸವಿಟ್ಟೆನು. ಆದ್ದರಿಂದ ಮಾತನಾಡಿದೆನು,” ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ. ಇದೇ ಮನೋಭಾವನೆಯಿಂದ ಕೂಡಿರುವ ನಾವು ಮಾತನಾಡಲೇಬೇಕು. ಏಕೆಂದರೆ ನಮಗೆ ವಿಶ್ವಾಸವಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ನಂಬಿದೆನು, ಆದ್ದರಿಂದ ಮಾತನಾಡುವೆನು,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ. ಅದೇ ನಂಬಿಕೆಯ ಆತ್ಮವನ್ನು ಹೊಂದಿದವರಾದ ನಾವು ಕೂಡಾ ನಂಬಿದ್ದೇವೆ, ಆದ್ದರಿಂದ ನಾವು ಮಾತನಾಡುತ್ತೇವೆ.