2 Corinthians 4:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವುಗಳೆಲ್ಲ ನಿಮಗೋಸ್ಕರವಾಗಿಯೇ. ಹೀಗೆ ದೇವರ ಕೃಪೆಯು ಹೆಚ್ಚುಹೆಚ್ಚು ಜನರಿಗೆ ಕೊಡಲ್ಪಡುವುದು. ಇದರಿಂದಾಗಿ, ಹೆಚ್ಚುಹೆಚ್ಚು ಜನರು ದೇವರ ಮಹಿಮೆಗಾಗಿ ಕೃತಜ್ಞತಾಸುತ್ತಿ ಸಲ್ಲಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.
Kannada BSI Bible 2016
ಅವೆಲ್ಲವುಗಳು ನಿಮಗಾಗಿಯೇ ಇರುತ್ತವೆ; ಅವು ಗಳಲ್ಲಿ ಅಧಿಕವಾಗಿ ದೊರಕುವ ಕೃಪೆಯು ಬಹುಜನ ರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಮಹಿಮೆಯನ್ನು ಉಂಟು ಮಾಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹುಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಸ್ತೋತ್ರವನ್ನು ಉಂಟುಮಾಡುವದು.
Kannada Bible (KNCL) BSI 2016
ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ. ಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ. ಇದರಿಂದ ಹೆಚ್ಚಾದ ಜನರಿಗೆ ತಲುಪುತ್ತಿರುವ ಕೃಪೆಯು, ಕೃತಜ್ಞತೆಯಿಂದ ತುಂಬಿ ಹರಿಯುವುದು. ಆಗ ದೇವರ ಮಹಿಮೆಯು ಸ್ಪಷ್ಟವಾಗುವುದು.