2 Corinthians 4:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದಕಾರಣವೇ, ನಾವೆಂದಿಗೂ ಬಲಹೀನರಾಗುವುದಿಲ್ಲ. ನಮ್ಮ ಭೌತಿಕ ದೇಹಕ್ಕೆ ವಯಸ್ಸಾಗುತ್ತಿದೆ ಮತ್ತು ಅದು ಬಲಹೀನವಾಗುತ್ತಿದೆ. ಆದರೆ ನಮ್ಮ ಆಂತರ್ಯವು ಪ್ರತಿದಿನ ಹೊಸದಾಗುತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.
Kannada BSI Bible 2016
ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನಾವು ಧೈರ್ಯಗೆಡುವದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಆಂತರ್ಯವು ದಿನೇದಿನೇ ಹೊಸದಾಗುತ್ತಾ ಬರುತ್ತದೆ.
Kannada Bible (KNCL) BSI 2016
ಹೀಗಿರಲು, ನಾವು ಎದೆಗುಂದುವುದಿಲ್ಲ. ನಮ್ಮ ಭೌತಿಕ ದೇಹವು ನಶಿಸುತ್ತಿದ್ದರೂ ನಮ್ಮ ಅಂತರಂಗವು ದಿನೇದಿನೇ ನೂತನವಾಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾವು ಅಧೈರ್ಯಪಡುವುದಿಲ್ಲ. ನಮ್ಮ ಹೊರಗಿನ ಮನುಷ್ಯ ಕ್ಷಯಿಸುತ್ತಿದ್ದರೂ ನಮ್ಮ ಆಂತರ್ಯ ಮನುಷ್ಯ ಅನುದಿನವೂ ನೂತನವಾಗುತ್ತಿದೆ.