2 Corinthians 4:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.
Kannada BSI Bible 2016
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.
Kannada Bible (KNCL) BSI 2016
ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.