2 Corinthians 4:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ನಮ್ಮ ಬಗ್ಗೆ ಬೋಧಿಸುವುದಿಲ್ಲ. ಆದರೆ ಯೇಸು ಕ್ರಿಸ್ತನೇ ಪ್ರಭುವೆಂದು ಮತ್ತು ಯೇಸುವಿಗೋಸ್ಕರ ನಿಮ್ಮ ಸೇವಕರಾಗಿದ್ದೇವೆಂದು ಬೋಧಿಸುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.
Kannada BSI Bible 2016
ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮನ್ನೇ ಪ್ರಸಿದ್ಧಿಪಡಿಸಿಕೊಳ್ಳದೆ ನಮ್ಮನ್ನು ಯೇಸುವಿನ ನಿವಿುತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಪ್ರಸಿದ್ಧಿಪಡಿಸುತ್ತೇವೆ.
Kannada Bible (KNCL) BSI 2016
ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ನಮ್ಮ ಬಗ್ಗೆಯೇ ಪ್ರಚಾರ ಮಾಡುವುದಿಲ್ಲ. ಆದರೆ ಕ್ರಿಸ್ತ ಯೇಸು ಕರ್ತ ದೇವರೆಂದೂ ನಾವು ಯೇಸುವಿಗಾಗಿ ನಿಮ್ಮ ಸೇವಕರಾಗಿದ್ದೇವೆ ಎಂದೂ ಪ್ರಚುರಪಡಿಸುತ್ತೇವೆ.