2 Corinthians 4:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.
Kannada BSI Bible 2016
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
Kannada Bible (KNCL) BSI 2016
“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.