2 Corinthians 4:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮಗೆ ಈ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೋ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಈ ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.
Kannada BSI Bible 2016
ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಲಾಧಿಕ್ಯವು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂದು ತೋರುವದಕ್ಕಾಗಿ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
Kannada Bible (KNCL) BSI 2016
ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ.