2 Corinthians 4:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿವೆ, ಆದರೆ ಸೋತುಹೋಗಿಲ್ಲ. ಅನೇಕಸಲ, ಏನು ಮಾಡಬೇಕೋ ನಮಗೆ ತಿಳಿಯದು, ಆದರೂ ನಾವು ಧೈರ್ಯಗೆಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ.
Kannada BSI Bible 2016
ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಅತಿ ಸಂಕಟ ಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ;
Kannada Bible (KNCL) BSI 2016
ನಾವು ಇಕ್ಕಟ್ಟುಬಿಕ್ಕಟ್ಟುಗಳಿಗೆ ಒಳಗಾಗಿದ್ದರೂ ನಜ್ಜುಗುಜ್ಜಾಗಲಿಲ್ಲ; ಸಂಶಯ ಸಂದೇಹಗಳಿಗೊಳಗಾದರೂ ನಿರಾಶೆಗೊಳ್ಳಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಜಜ್ಜಿಹೋಗಲಿಲ್ಲ, ನಾವು ಚಂಚಲರಾಗಿದ್ದರೂ ನಿರಾಶರಾಗಲಿಲ್ಲ.