2 Corinthians 5:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.
Kannada BSI Bible 2016
ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ.
Kannada Bible (KNCL) BSI 2016
ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.