2 Corinthians 5:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವೆಲ್ಲರೂ ನ್ಯಾಯ ವಿಚಾರಣೆಗಾಗಿ ಕ್ರಿಸ್ತನ ಮುಂದೆ ನಿಂತುಕೊಳ್ಳಲೇಬೇಕು. ಪ್ರತಿಯೊಬ್ಬನು ಇಹಲೋಕದ ದೇಹದಲ್ಲಿ ವಾಸವಾಗಿದ್ದಾಗ ಮಾಡಿದ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಪ್ರತಿಫಲವನ್ನು ಹೊಂದುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.
Kannada BSI Bible 2016
ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೇದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾಗಿ ಪ್ರತಿಫಲವನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕು.
Kannada Bible (KNCL) BSI 2016
ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು.