2 Corinthians 5:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಭುವಿನ ಭಯ ಎಂದರೇನೆಂಬುದು ನಮಗೆ ತಿಳಿದಿದೆ. ಆದ್ದರಿಂದ ಸತ್ಯವನ್ನು ಸ್ವೀಕರಿಸಿಕೊಳ್ಳುವಂತೆ ಜನರಿಗೆ ಸಹಾಯ ಮಾಡಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲನು. ನೀವು ಸಹ ನಿಮ್ಮ ಹೃದಯಗಳಲ್ಲಿ ನಮ್ಮನ್ನು ತಿಳಿದುಕೊಂಡಿದ್ದೀರೆಂದು ನಂಬುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.
Kannada BSI Bible 2016
ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.
Kannada Bible (KNCL) BSI 2016
ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತನ ಭಯಭಕ್ತಿಯನ್ನು ಅರಿತಿರುವ ಕಾರಣ, ಜನರ ಮನವೊಲಿಸಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲವರಾಗಿದ್ದಾರೆ. ಅದು ನಿಮ್ಮ ಮನಸ್ಸಾಕ್ಷಿಗೂ ತಿಳಿದಿದೆ ಎಂದು ನಾನು ನಂಬುತ್ತೇನೆ.