2 Corinthians 5:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಹುಚ್ಚರಾಗಿದ್ದರೆ ಅದು ದೇವರಿಗೋಸ್ಕರವಾಗಿಯೇ. ನಮಗೆ ಸ್ವಸ್ಥಬುದ್ಧಿಯಿದ್ದರೆ ಅದು ನಿಮಗೋಸ್ಕರವಾಗಿಯೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮಗೆ ಬುದ್ಧಿಭ್ರಮಣೆಯಾಗಿದ್ದರೆ ಅದು ದೇವರ ಮಹಿಮೆಗಾಗಿಯೇ; ಹಾಗೂ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿಯೇ.
Kannada BSI Bible 2016
ನಮಗೆ ಬುದ್ದಿಪರವಶವಾಗಿದ್ದರೆ ಅದು ದೇವರಿಗಾಗಿ ಇರುತ್ತದೆ; ಇಲ್ಲವೆ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ನಿಮಿತ್ತವಾಗಿ ಇರುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮಗೆ ಬುದ್ಧಿಪರವಶವಾಗಿದ್ದರೆ ಅದು ದೇವರ ಮಹಿಮೆಗಾಗಿಯೇ ಅದೆ; ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿ ಅದೆ.
Kannada Bible (KNCL) BSI 2016
ನಮಗೆ ಬುದ್ಧಿಭ್ರಮಣೆಯಾಗಿದೆಯೆಂದು ಭಾವಿಸುತ್ತೀರೋ? ಹಾಗಿದ್ದರೆ ಅದು ದೇವರ ಮಹಿಮೆಗಾಗಿ ನಾವು ಸ್ವಸ್ಥಬುದ್ಧಿಯುಳ್ಳವರೆಂದು ನೆನೆಸುತ್ತೀರೋ? ಹಾಗಿದ್ದರೆ ಅದು ನಿಮ್ಮ ಹಿತಕ್ಕಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗೆ ಬುದ್ಧಿ ಭ್ರಮಣೆಯಾಗಿದ್ದರೆ, ಅದು ದೇವರಿಗಾಗಿಯೇ. ನಾವು ಸ್ವಸ್ಥಬುದ್ಧಿಯುಳ್ಳವರಾಗಿದ್ದರೆ, ಅದು ನಿಮಗಾಗಿಯೇ.