2 Corinthians 5:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಿಸುತ್ತದೆ. ಏಕೆಂದರೆ, ಎಲ್ಲಾ ಜನರಿಗೋಸ್ಕರವಾಗಿ ಆತನು ಸತ್ತನೆಂಬುದು ನಮಗೆ ಗೊತ್ತಿದೆ. ಆದ್ದರಿಂದ ಎಲ್ಲರೂ ಸತ್ತುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.
Kannada BSI Bible 2016
ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನ ಪ್ರೀತಿಯು ನಮಗೆ ಒತ್ತಾಯಮಾಡುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡೆವು.
Kannada Bible (KNCL) BSI 2016
ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವಿನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ. ಏಕೆಂದರೆ, ಎಲ್ಲರಿಗೋಸ್ಕರ ಕ್ರಿಸ್ತ ಯೇಸು ಸತ್ತದ್ದರಿಂದ, ಎಲ್ಲರೂ ಸತ್ತಂತಾಯಿತು.