2 Corinthians 5:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
Kannada BSI Bible 2016
ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
Kannada Bible (KNCL) BSI 2016
ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.