2 Corinthians 5:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದೆಲ್ಲಾ ದೇವರಿಂದಲೇ ಆಯಿತು. ಕ್ರಿಸ್ತನ ಮೂಲಕವಾಗಿ ದೇವರು ನಮ್ಮನ್ನು ತನ್ನೊಂದಿಗೆ ಸಮಾಧಾನ ಪಡಿಸಿಕೊಂಡಿದ್ದಾನೆ. ಇದಲ್ಲದೆ ಇತರರನ್ನು ಈ ಸಮಾಧಾನಕ್ಕೆ ಕರೆದುಕೊಂಡು ಬರುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;
Kannada BSI Bible 2016
ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದೆಲ್ಲಾ ದೇವರಿಂದಲೇ ಉಂಟಾದದ್ದು. ಆತನು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;
Kannada Bible (KNCL) BSI 2016
ಇದೆಲ್ಲಾ ಆಗುವುದು ದೇವರಿಂದ. ದೇವರು ಕ್ರಿಸ್ತಯೇಸುವಿನ ಮುಖಾಂತರ ನಮ್ಮನ್ನು ತಮ್ಮೊಡನೆ ಸಂಧಾನಪಡಿಸಿಕೊಂಡಿದ್ದಾರೆ.ಇದಲ್ಲದೆ, ಇತರರನ್ನು ಸಂಧಾನಕ್ಕೆ ತರುವ ಕಾರ್ಯವನ್ನು ನಮಗೆ ವಹಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವೆಲ್ಲವೂ ದೇವರಿಂದಲೇ ಆಯಿತು. ನಮ್ಮನ್ನು ಕ್ರಿಸ್ತ ಯೇಸುವಿನ ಮೂಲಕ ತಮ್ಮೊಂದಿಗೆ ಸಮಾಧಾನ ಮಾಡಿಕೊಂಡ ದೇವರು, ಇತರರನ್ನು ಸಮಾಧಾನಕ್ಕೆ ತರುವ ಸೇವೆಯನ್ನೂ ನಮಗೆ ಕೊಟ್ಟಿರುತ್ತಾರೆ: