2 Corinthians 5:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಈಗ ನಾವು ಈ ದೇಹದಲ್ಲಿ ಬಳಲಿ ಹೋಗಿದ್ದೇವೆ. ಪರಲೋಕದಲ್ಲಿರುವ ನಮ್ಮ ಮನೆಯನ್ನು ದೇವರು ನಮಗೆ ಯಾವಾಗ ಕೊಡುವನೊ ಎಂದು ಹಾತೊರೆಯುತ್ತಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.
Kannada BSI Bible 2016
ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಈಗಿನ ದೇಹದಲ್ಲಿರುವವರೆಗೂ ನರಳುತ್ತೇವೆ. ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ನಾವು ದೇಹದ ಮೇಲೆ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇವೆ,
Kannada Bible (KNCL) BSI 2016
ಈ ಗುಡಾರದಲ್ಲಿರುವವರೆಗೆ ನಾವು ನರಳುತ್ತೇವೆ; ಸ್ವರ್ಗೀಯ ನಿವಾಸವನ್ನು ನಮ್ಮ ದೇಹದ ಮೇಲೆ ಎಂದಿಗೆ ನಾವು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಪರಲೋಕದ ನಿವಾಸವನ್ನು ನೀವೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಈ ಜೀವನದಲ್ಲಿ ನರಳುತ್ತಿದ್ದೇವೆ.