2 Corinthians 5:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರನ್ನು ಮೆಚ್ಚಿಸಬೇಕೆಂಬುದೊಂದೇ ನಮಗಿರುವ ಉದ್ದೇಶವಾಗಿದೆ. ನಾವು ನಮ್ಮ ದೇಹದಲ್ಲಿ ಇಲ್ಲಿ ವಾಸವಾಗಿರುವಾಗಲೂ ಪ್ರಭುವಿನೊಂದಿಗೆ ಅಲ್ಲಿ ವಾಸವಾಗಿರುವಾಗಲೂ ಆತನನ್ನು ಮೆಚ್ಚಿಸಬೇಕೆಂಬುದೊಂದೇ ನಮ್ಮ ಬಯಕೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ.
Kannada BSI Bible 2016
ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ, ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನಿಗೆ ಮೆಚ್ಚುವವರಾಗಿರಬೇಕೆಂಬದೇ ನಮ್ಮ ಗುರಿಯಾಗಿದೆ.
Kannada Bible (KNCL) BSI 2016
ಈ ಕಾರಣ, ಇಲ್ಲಾದರೂ ಸರಿ, ಅಲ್ಲಾದರೂ ಸರಿ, ಪ್ರಭು ಮೆಚ್ಚುವಂತೆ ಬಾಳುವುದೊಂದೇ ನಮ್ಮ ಗುರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾವು ದೇಹದಲ್ಲಿದ್ದರೂ ಸರಿಯೇ, ಅದನ್ನು ಬಿಟ್ಟಿದ್ದರೂ ಸರಿಯೇ ಕರ್ತನನ್ನು ಮೆಚ್ಚಿಸಬೇಕೆಂಬುದೇ ನಮ್ಮ ಗುರಿಯಾಗಿದೆ.