2 Corinthians 6:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೊರಿಂಥದಲ್ಲಿರುವ ನಿಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತಾಡಿದ್ದೇವೆ. ನಮ್ಮ ಹೃದಯಗಳನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊರಿಂಥದವರೇ, ಬಿಚ್ಚುಮನದಿಂದಲೂ ತೆರೆದ ಹೃದಯದಿಂದಲೂ ನಾವು ನಿಮ್ಮೊಡನೆ ಮಾತನಾಡಿದ್ದೇವೆ.
Kannada BSI Bible 2016
ಓ ಕೊರಿಂಥದವರೇ, ನಮ್ಮ ಹೃದಯವು ವಿಶಾಲವಾಗಿರುವದರಿಂದ ನಾವು ನಿಮ್ಮೊಡನೆ ಧಾರಳವಾಗಿ ಮಾತನಾಡುತ್ತಾ ಇದ್ದೇವೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊರಿಂಥದವರೇ, ನಾವು ನಿಮ್ಮೊಡನೆ ಧಾರಾಳವಾಗಿ ಮಾತಾಡುತ್ತಾ ಇದ್ದೇವೆ; ನಮ್ಮ ಹೃದಯವು ನಿಮ್ಮ ವಿಷಯದಲ್ಲಿ ವಿಶಾಲವಾಯಿತು.
Kannada Bible (KNCL) BSI 2016
ಕೊರಿಂಥದ ನಿವಾಸಿಗಳೇ, ಬಿಚ್ಚುಮನದಿಂದಲೂ ತೆರೆದ ಹೃದಯದಿಂದಲೂ ನಾವು ನಿಮ್ಮೊಡ಼ನೆ ಮಾತನಾಡಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊರಿಂಥದವರೇ, ನಾವು ನಿಮ್ಮೊಂದಿಗೆ ಮುಚ್ಚುಮರೆಯಿಲ್ಲದೆ ಹೇಳಿಕೊಂಡೆವು, ನಮ್ಮ ಹೃದಯವನ್ನು ನಿಮ್ಮೊಂದಿಗೆ ವಿಶಾಲವಾಗಿ ತೆರೆದಿದ್ದೇವೆ.