2 Corinthians 6:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕ್ರಿಸ್ತನಂಬಿಕೆಯಿಲ್ಲದ ಜನರಿಗೂ ನಿಮಗೂ ವ್ಯತ್ಯಾಸವಿದೆ. ಆದ್ದರಿಂದ ನೀವು ಅವರೊಂದಿಗೆ ಸೇರಬೇಡಿ. ಒಳ್ಳೆಯದು ಮತ್ತು ಕೆಟ್ಟದು ಒಟ್ಟಾಗಿ ಸೇರಲು ಸಾಧ್ಯವಿಲ್ಲ. ಬೆಳಕು ಕತ್ತಲೆಯೊಡನೆ ಅನ್ಯೋನ್ಯವಾಗಿರಲು ಸಾಧ್ಯವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?
Kannada BSI Bible 2016
ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕ್ರಿಸ್ತನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಾಗಬೇಡಿರಿ. ಧರ್ಮಕ್ಕೂ ಅಧರ್ಮಕ್ಕೂ ಜೊತೆಯೇನು?
Kannada Bible (KNCL) BSI 2016
ಅವಿಶ್ವಾಸಿಗಳೊಡನೆ ಒಂದಾಗಬೇಡಿ. ಧರ್ಮಕ್ಕೂ ಅಧರ್ಮಕ್ಕೂ ಸಾಟಿಯೆಲ್ಲಿ? ಬೆಳಕಿಗೂ ಕತ್ತಲೆಗೂ ಎಲ್ಲಿಯ ಸಂಬಂಧ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಲ್ಲದವರೊಂದಿಗೆ ಸೇರಿ ಒಂದಾಗಿ ಪಾಲುಗಾರರಾಗಬೇಡಿರಿ. ನೀತಿಗೂ ಅನೀತಿಗೂ ಸಮಾನವೆಲ್ಲಿ? ಅಥವಾ ಬೆಳಕಿಗೂ ಕತ್ತಲೆಗೂ ಅನ್ಯೋನ್ಯತೆಯೇನು?