2 Corinthians 6:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರ ಆಲಯವು ವಿಗ್ರಹಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವೇ? ನಾವು ಜೀವಸ್ವರೂಪನಾದ ದೇವರ ಆಲಯವಾಗಿದ್ದೇವೆ. ದೇವರು ಹೇಳಿದಂತೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.
Kannada BSI Bible 2016
ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
Kannada Bible (KNCL) BSI 2016
ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”