2 Corinthians 6:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದ್ದರಿಂದ ಆ ಜನರನ್ನು ಬಿಟ್ಟು ಹೊರಬನ್ನಿರಿ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.
Kannada BSI Bible 2016
ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಅನ್ಯಜನರ ಮಧ್ಯದಲ್ಲಿಂದ ಹೊರಟು ಬಂದು ಪ್ರತ್ಯೇಕವಾಗಿರಿ; ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.
Kannada Bible (KNCL) BSI 2016
ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”