2 Corinthians 6:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಹೀಗೆನ್ನುತ್ತಾನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ.
Kannada BSI Bible 2016
(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು ಎಂದು ದೇವರು ಹೇಳುತ್ತಾನಲ್ಲಾ. ಈಗಲೇ ಆ ಸುಪ್ರಸನ್ನತೆಯಕಾಲ; ಇದೇ ಆ ರಕ್ಷಣೆಯ ದಿನ.
Kannada Bible (KNCL) BSI 2016
:ಸುಪ್ರಸನ್ನತೆಯ ಕಾಲದಲ್ಲಿ ನಿನ್ನನ್ನಾಲಿಸಿದೆನು; ಉದ್ಧಾರ ದಿನದಂದು ನಿನಗೆ ನೆರವಾದೆನು,” ಎಂದಿದ್ದಾರೆ ದೇವರು. ಇದೇ ಆ ಸುಪ್ರಸನ್ನತೆಯ ಕಾಲ. ಇದೇ ಆ ಉದ್ಧಾರದ ಸುದಿನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ದೇವರು ಹೇಳಿದ ಹಾಗೆ, “ಪ್ರಸನ್ನತೆಯ ಕಾಲದಲ್ಲಿ ನಿನ್ನ ಪ್ರಾರ್ಥನೆಯನ್ನು ನಾನು ಲಾಲಿಸಿದೆನು. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು,” ಇಗೋ, ಇದೇ ದೇವರ ಮೆಚ್ಚುಗೆಯ ಕಾಲ, ಈಗಲೇ ರಕ್ಷಣೆಯ ದಿನ.