2 Corinthians 6:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ.
Kannada BSI Bible 2016
ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರಿಸುತ್ತೇವೆ.
Kannada Bible (KNCL) BSI 2016
ಏಟುಪೆಟ್ಟುಗಳನ್ನು ತಿಂದಿದ್ದೇವೆ, ಸೆರೆಮನೆವಾಸ ಅನುಭವಿಸಿದ್ದೇವೆ, ಕೋಪಕ್ರಾಂತಿಗಳಿಗೆ ಗುರಿಯಾಗಿದ್ದೇವೆ, ಮೈಮುರಿಯೆ ದುಡಿದಿದ್ದೇವೆ, ನಿದ್ದೆಗೆಟ್ಟು ಬಳಲಿದ್ದೇವೆ, ಊಟವಿಲ್ಲದೆ ಸೊರಗಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಪೆಟ್ಟು ತಿಂದಿದ್ದೇವೆ, ಸೆರೆವಾಸವಾಗಿದ್ದೇವೆ, ಕಲಹಗಳನ್ನು ಅನುಭವಿಸಿದ್ದೇವೆ, ಶ್ರಮೆಪಟ್ಟು ದುಡಿದಿದ್ದೇವೆ, ರಾತ್ರಿಯಲ್ಲಿ ನಿದ್ರೆಗೆಟ್ಟಿದ್ದೇವೆ, ಊಟವಿಲ್ಲದೆ ಹಸಿದಿದ್ದೇವೆ,